ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢಶಾಲೆಯಲ್ಲಿ ದೇಶದ 75 ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಚಿತ್ರಕಲೆ, ರಂಗೋಲಿ ,ಪ್ರಬಂಧ, ಭಾಷಣ, ಗಾಯನ, ನೃತ್ಯ, ಕವಿಗೋಷ್ಠಿ ಹೀಗೆ ವಿವಿಧ ಪ್ರಕಾರಗಳಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧೆಗಳಲ್ಲಿ ಹೆಚ್ಚಿನ ಮಕ್ಕಳು ಪಾಲ್ಗೊಂಡು ತಮ್ಮ ಕ್ರಿಯಾಶೀಲತೆಯನ್ನು ಮೆರೆದಿದ್ದಾರೆ. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಆಗಸ್ಟ್ 15ರಂದು ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು.
Comments
Post a Comment